ಕಿನ್ನಿಗೋಳಿ ಪ್ರದೇಶದಲ್ಲಿ ಸಂಚಲನ ಮೂಡಿಸಿರುವ ಪ್ರಕರಣವೊಂದರಲ್ಲಿ, ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ, ಉದ್ಯಮಿ ರಾಕೀ ಪಿಂಟೋ (68) ಅವರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಪ್ರೇಮ ವೈಫಲ್ಯದಿಂದ ಕುಪಿತಗೊಂಡ ಯುವಕನೊಬ್ಬ, ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ತಪ್ಪಾಗಿ ಭಾವಿಸಿ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಇಂದು ಬೆಳಿಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ನಡೆದಿದೆ.
ನವವಿವಾಹಿತೆಯೊಬ್ಬರ ಶವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರೈಲ್ವೆ ಹಳಿ ಮೇಲೆ ಪತ್ತೆಯಾದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ (24) ಮೃತಪಟ್ಟ ದುರ್ದೈವಿ.
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ಯುವತಿ ಗರ್ಭಿಣಿಯಾಗುತ್ತಿದ್ದಂತೆಯೇ ಮದುವೆಗೆ ನಿರಾಕರಿಸಿದ ಯುವಕನ ವಿರುದ್ಧ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹದ ಗಂಭೀರ ಆರೋಪದೊಂದಿಗೆ ಪ್ರಕರಣ ದಾಖಲಾಗಿದೆ.