ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್‌ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್‌ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ರಾಜ್ಯಸಭಾ ಪ್ರಾದೇಶಿಕ ಅಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ ₹1.46 ಲಕ್ಷ ರೂ. ನಂತೆ ಒಟ್ಟು ₹1.46 ಕೋಟಿ ರೂ. ಮಂಜೂರಾಗಿದೆ