ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾಗಿರುವ ಶವಗಳ ಕುರಿತ ಪ್ರಕರಣದ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಇದೀಗ ವಿಶೇಷ ತನಿಖಾ ತಂಡ (S.I.T.) ಒಂದನ್ನು ರಚಿಸಿದೆ.
ರಾಜ್ಯಸಭಾ ಸದಸ್ಯ ಹಾಗೂ ಪದ್ಮವಿಭೂಷಣ ಪುರಸ್ಕೃತ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳಿಗೆ ಬೆಂಗಳೂರು ಸಿವಿಲ್ ಕೋರ್ಟ್ ಮಹತ್ವದ ತಡೆಯಾಜ್ಞೆ ನೀಡಿದೆ
ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ, ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಿ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.
"ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್'' ಮುಖಾಂತರ ಪೂಜ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂಪಾಯಿಯ ಮೊತ್ತದ ಡಿಡಿಯನ್ನು ಶ್ರೀ ಕಲ್ಲಮಠದ ಜೀರ್ಣೋದ್ಧಾರ ಸಮಿತಿಯವರಿಗೆ ಭಕ್ತಿಪೂರ್ವಕವಾಗಿ ಹಸ್ತಾಂತರಿಸಲಾಯಿತು.