ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರು ಹಾಳು ಮಾಡಲು ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ, ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ವಿಶೇಷ ಯಾಗವೊಂದು ನಡೆಯಿತು. ಮಹರ್ಷಿ ಆನಂದ ಗುರೂಜಿಯವರ ನೇತೃತ್ವದಲ್ಲಿ ಈ ಯಾಗವನ್ನು ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ, ಬಿಜೆಪಿ ನಾಳೆಯಿಂದ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ "ಧರ್ಮಯುದ್ಧ" ಹೋರಾಟವನ್ನು ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಯೂಟ್ಯೂಬರ್ ಸಮೀರ್ ವಿರುದ್ಧ ಡಿಜಿ-ಐಜಿಪಿಗೆ ದೂರು ಸಲ್ಲಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂಬ ಕೆಲವು ಮಾಧ್ಯಮಗಳ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್‌ಐಟಿ (ವಿಶೇಷ ತನಿಖಾ ತಂಡ) ಸ್ಪಷ್ಟಪಡಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಿಂದೂ ದೇವಸ್ಥಾನದ ಆಡಳಿತ ಜೈನ ಕುಟುಂಬದ ಕೈಯಲ್ಲೇಕಿದೆ ಎಂಬ ಸಾಮಾಜಿಕ ಮಾಧ್ಯಮಗಳ ಚರ್ಚೆಗಳಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸ್ವತಃ ಸ್ಪಷ್ಟೀಕರಣ ನೀಡಿದ್ದಾರೆ.