ಬಿಜೆಪಿಯಿಂದ ಆಫರ್ ಬಂದಿತ್ತು. ಅದನ್ನು ಒಪ್ಪಿಕೊಂಡಿದ್ದರೆ ನಾನು ಆಗಲೇ ಉಪಮುಖ್ಯಮಂತ್ರಿಯಾಗಬಹುದಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯ ಆಫರ್ ನೀಡಿದ್ದ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.
ರಾಜ್ಯ ಸರ್ಕಾರವು ನಡೆಸುತ್ತಿರುವ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್‌ನ ಮಾಜಿ ಮುಖ್ಯಸ್ಥ ಡಾ. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ಲೇಖಕಿ ಹಾಗೂ ಲೋಕೋಪಕಾರಿ ಸುಧಾ ಮೂರ್ತಿ ಅವರು ಭಾಗವಹಿಸಲು ನಿರಾಕರಿಸಿರುವುದು ಬೆಳಕಿಗೆ ಬಂದಿದೆ.
ಕಾರ್ಕಳ ಮೂಲದ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ರವಿಶಂಕರ ಶೇರಿಗಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ರಾಜ್ಯ ಘಟಕದ ಚಾಮರಾಜಪೇಟೆಯಲ್ಲಿರುವ ಕಚೇರಿ 'ಕೇಶವ ಕೃಪ' ಗೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.