ಮುಖ್ಯಮಂತ್ರಿಯಾಗುವ ಆಸೆಯಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, "ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ. ಯಾಕಾಗಬಾರದು?" ಎಂದು ತಮ್ಮ ಅಭಿಲಾಷೆಯನ್ನು ಬಹಿರಂಗಪಡಿಸಿದರು.
“ನಮ್ಮ ಬಳಿ ಹಣವಿಲ್ಲ, ಸಿದ್ದರಾಮಯ್ಯನವರಲ್ಲೂ ದುಡ್ಡಿಲ್ಲ” ಎಂಬ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.
ಕರಾವಳಿ ಪ್ರದೇಶದಲ್ಲಿ ಕೋಮು ಸಂಘರ್ಷ ತಡೆಯುವ ಉದ್ದೇಶದಿಂದ ರಚಿಸಲಾದ ವಿಶೇಷ ಕಾರ್ಯಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್)ಗೆ ಜೂನ್ 13 ರಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಚಾಲನೆ ನೀಡಿದರು.