ಬ್ಬಿನ ಇಳುವರಿಯನ್ನು ಪರಿಗಣಿಸದೆ, ಪ್ರತಿ ಟನ್ ಕಬ್ಬಿಗೆ 3,300/- ರೂ. ದರವನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ ನಿರ್ದೇಶನವನ್ನು ಕಲಬುರಗಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪಾಲಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ, ವಿಧಾನಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಕ್ಷಣ ಆದೇಶ ಜಾರಿಗೊಳಿಸಲು ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆಯ ರೈತ ಸಮುದಾಯದ ದೀರ್ಘಕಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನಾಯಕರು ಇಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಭೇಟಿ ಮಾಡಿ ಮಹತ್ವದ ಮನವಿಯನ್ನು ಸಲ್ಲಿಸಿದ್ದಾರೆ