ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯಲ್ಲಿ ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಎನ್.ರಾಮಚಂದ್ರ ರಾವ್ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಶಾಲು ಹೊದೆಸಿ ಸನ್ಮಾನಿಸಿದರು.
ಯರ್ಲಪಾಡಿ ಗ್ರಾಮಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಇಂದು ಗ್ರಾಮಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷರಾದ ಸುನಿಲ್ ಕುಮಾರ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಒಂದು ದಿನದ ಕಾರ್ಯಗಾರವನ್ನು ಶ್ರೀ ವೆಂಕಟರಮಣ ದೇವ ಎಜುಕೇಶನ್ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿಗಳಾದ ಶ್ರೀ ಕೆ ರಾಧಾಕೃಷ್ಣ ಶೆಣೈ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.