ಕಂಚಿನ ಮೂರ್ತಿ ನಿರ್ಮಿಸಬೇಕಿದ್ದಲ್ಲಿ ಹಿತ್ತಾಳೆಯ ಮೂರ್ತಿ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ವಿರುದ್ಧ ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಪ್ರಭಾವಿ ನಾಯಕರ ಹೆಸರುಗಳನ್ನು ದುರ್ಬಳಕೆ ಮಾಡಿಕೊಂಡು, ಶ್ರೀಮಂತ ಕುಟುಂಬದ ಸುಮಾರು 20 ಮಹಿಳೆಯರಿಗೆ 30 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
2019ರಲ್ಲಿ ಭಾರತದಿಂದ ಪಲಾಯನ ಮಾಡಿದ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ, ದಕ್ಷಿಣ ಅಮೆರಿಕದ ಬೊಲೀವಿಯಾದ ಬುಡಕಟ್ಟು ಜನರನ್ನು ವಂಚಿಸಿ ಭೂಮಿ ಸ್ವಾಧೀನಕ್ಕೆ ಮುಂದಾದ ಆರೋಪ ಕೇಳಿಬಂದಿದೆ.