ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಾವು ನೀಡಿದ್ದಾರೆ ಎನ್ನಲಾದ ಹೇಳಿಕೆಗಾಗಿ ಬಂಧನಕ್ಕೆ ಒತ್ತಾಯಿಸಿದ ಬಿಜೆಪಿ ನಾಯಕರು ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆದೋರಿರುವ ಕೆಂಪುಕಲ್ಲು (laterite stone) ಮತ್ತು ಮರಳು ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ, ಭಾರತೀಯ ಜನತಾ ಪಕ್ಷವು (ಬಿಜೆಪಿ) ಜುಲೈ 14ರಂದು ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಘೋಷಿಸಿದ್ದಾರೆ.