ಮುದ್ರಾಡಿ ಎಂ. ಎನ್.ಡಿ. ಎಸ್. ಎಂ.ಅನುದಾನಿತ ಪ್ರೌಢಶಾಲೆಯ ಕಲ್ಪನಾ ಪರಿಸರ ಸಂಘ ಮತ್ತು ಹೆಬ್ರಿ ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಡೆದ "ಇಳೆಗೈಸಿರಿ" ವನಮಹೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ಮಗುವಿನ ಮನೆಗೊಂದು ಗಿಡವನ್ನು ವಿತರಿಸಲಾಯಿತು.
ಕುಚ್ಚೂರು ಹೆರ್ಗ ವಿಠ್ಠಲ ಶೆಟ್ಟಿ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಸ್ನೇಹಲತಾ ಟಿ. ಜಿ. ಯವರು ಮುದ್ರಾಡಿಯ ಎಂ.ಎನ್. ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳನ್ನು ದೀಪಬೆಳಗಿ ಉದ್ಘಾಟಿಸಿದರು
ಮುದ್ರಾಡಿ ಗ್ರಾಮದ ಅತೀ ಪುರಾತನ ಬಲ್ಲಾಡಿ ಶ್ರೀ ಅರ್ಧನಾರೀಶ್ವರ ಅಬ್ಬಗ ದಾರಗ ದೇವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ದಾರ ಕುರಿತು ಪೂರ್ವಭಾವಿ ಸಭೆಯು ಮುದ್ರಾಡಿ ಸಮುದಾಯ ಭವನದಲ್ಲಿ ಜೂ. 22 ರಂದು ನಡೆಯಿತು.