ರಾಜ್ಯದ ಗಮನ ಸೆಳೆದಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಬಾರಿಯೂ ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ.
2003ರ ಸಾಫ್ಟ್‌ವೇರ್ ಇಂಜಿನಿಯರ್ ಬಿ.ವಿ. ಗಿರೀಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಖಾಯಂ ಮಾಡಿದೆ.
ಇಂದು ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಕುರಿತು ತೀರ್ಪು ಪ್ರಕಟಿಸಲಿದ್ದು, ಕರ್ನಾಟಕ ರಾಜಕೀಯದ ಭವಿಷ್ಯಕ್ಕೆ ಮಹತ್ವದ ಬೆಳವಣಿಗೆಯಾಗಲಿದೆ