ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಪಿತೃ ವಿಯೋಗವಾಗಿದೆ. ಅವರ ತಂದೆ, ಎಂ.ಕೆ. ವಾಸುದೇವ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು (ಜುಲೈ 17, 2025) ಬೆಳಗ್ಗೆ ನಿಧನರಾಗಿದ್ದಾರೆ.
ಮಾಜಿ ಸಚಿವ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ಅವರ ಹಿರಿಯ ಸಹೋದರ ಸುಜಿತ್ ಕುಮಾರ್ (53) ಅನಾರೋಗ್ಯದಿಂದ ಬಳಲುತ್ತಿದ್ದು, ಶುಕ್ರವಾರ ಅವರ ದೇಹಾಂತವಾಯಿತು.