ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಡ್ಡಿನಂಗಡಿ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಸರಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯು ಸಂಜೆ ಹೊತ್ತಿನಲ್ಲಿ ನಡೆದಿದ್ದು, ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಭಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ , ಭಜನಾ ಮಂಡಳಿಗಳ ಒಕ್ಕೂಟ , ಕರಾವಳಿ ಭಜನಾ ಸಂಸ್ಕಾರ ವೇದಿಕೆ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ/27/07/2025 ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೈಲೂರು ವಲಯದ ಭಜನಾ ಮಂಡಳಿಗಳಿಗೆ ಪರಿಕರ ವಿತರಣಾ ಕಾರ್ಯಕ್ರಮ ನೆರವೇರಿತು.