ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಯುವಮೋರ್ಚಾ ಕಾರ್ಕಳ ಹಾಗೂ ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜೀಯವರ 75ನೇ ಜನುಮದಿನದ ಆಚರಣೆಯ ಸಲುವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಶಾಸಕರ ಕಛೇರಿ ವಿಕಾಸದಲ್ಲಿ ನಡೆಯಿತು.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸೈಬರ್ ಸೆಕ್ಯೂರಿಟಿ ವಿಭಾಗವು ಜಪಾನಿನ ವಿಲ್ ಡಿಸೈನ್ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರವನ್ನು ಕ್ಯಾಂಪಸ್ ನಲ್ಲಿ ಸ್ಥಾಪಿಸಿ ಸೆಪ್ಟೆಂಬರ್ 15 ರಂದು ಅದನ್ನು ಉದ್ಘಾಟಿಸಲಾಯಿತು.