ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು
ಕನ್ನಡ ಮತ್ತು ತುಳು ನಾಟಕ ರಂಗದಲ್ಲಿ ಅಭಿನಯಿಸಿ, ಬಳಿಕ ತುಳು, ಕನ್ನಡ ಚಲನ ಚಿತ್ರಗಳ ಅಭಿನಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಸಮೀಪದ ನಿಂಜೂರಿನ ಪ್ರೀತಮ್ ನಾಯಕ್ ಅವರನ್ನು ಮುಂಬೈಯ ಕಲಾ ಜಗತ್ತು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಪ್ರಸಿದ್ಧ ಕಲಾತ್ಮಕ ಪ್ರತಿಭೆ ಅಭಿಷೇಕ್ ಬಜಗೋಳಿ ಅವರ ರಚನೆ ಮತ್ತು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ವರ್ಷದ ಹೊಚ್ಚ ಹೊಸ ತುಳು ಹಾಸ್ಯಮಯ ಸಾಮಾಜಿಕ ನಾಟಕ "ಬಿರ್ಸೆ" ಶೀಘ್ರದಲ್ಲೇ ರಂಗೇರಲಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು.
ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್ ತನ್ನ ಅಸ್ತಿತ್ವವನ್ನು ತೋರಿಸಲು ಪ್ರತೀ 3 ತಿಂಗಳಿಗೊಮ್ಮೆ ನೀಡುವ ಪತ್ರಿಕಾ ಹೇಳಿಕೆಯಲ್ಲಿ ಉಡುಪಿ ಶಾಸಕರನ್ನು ಟೀಕಿಸುವ ಭರದಲ್ಲಿ ಏಕವಚನ ಶಬ್ದ ಪ್ರಯೋಗ ಮಾಡಿರುವುದು ಅವರ ರಾಜಕೀಯ ಹತಾಶೆ ಮತ್ತು ಅಪ್ರಬುದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ.