ಬಜೆಟ್ ಅಧಿವೇಶನದ ಕೊನೆಯ ದಿನ ಅಮಾನತುಗೊಳಗಾದ 18 ಶಾಸಕರ ವಿರುದ್ಧದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ, ಬಿಜೆಪಿ ನಿಯೋಗ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಇತ್ತೀಚಿಗೆ ಮುಕ್ತಾಯಗೊಂಡ ಅಧಿವೇಶನದಲ್ಲಿ ಗದ್ದಲ ಸೃಷ್ಟಿಸಿದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ಕುರಿತು ಸ್ಪೀಕರ್ ಯು.ಟಿ. ಖಾದರ್ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.