ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಪೊಲೀಸ್ ಠಾಣೆಯ ಮುಂದೆ ಗುಂಪು ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆಗಸ್ಟ್ 6, 2025 ರಂದು ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ಸಂದರ್ಭದಲ್ಲಿ, ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲೀಸರ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಆರು ವ್ಯಕ್ತಿಗಳಿಗೆ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ದೊರೆತಿದೆ.