ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುತ್ತಿದ್ದಾಗ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಬೆಂಬಲಿಗರು ಸತತವಾಗಿ ಘೋಷಣೆಗಳನ್ನು ಕೂಗಿದ್ದರಿಂದ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನಗೊಂಡರು.
ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ (VIP) ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಹಾರ್ನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ), ಡಾ. ಎಂ.ಎ. ಸಲೀಂ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ದಿಂದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.