ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹೆಣಗಳನ್ನು ಹೂತು ಹಾಕಿರುವುದಾಗಿ ಇತ್ತೀಚೆಗೆ ವ್ಯಕ್ತಿಯೋರ್ವ ಧರ್ಮಸ್ಥಳ ಠಾಣೆಗೆ ದೂರು ನೀಡಿದ ಪ್ರಕರಣದ ತನಿಖೆಯನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ನಡೆಸಬೇಕು ಎಂದು ದೂರುದಾರನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ ಒತ್ತಾಯಿಸಿದ್ದಾರೆ.