ಪ್ರತಿ ವರ್ಷ ಅಕ್ಟೋಬರ್ 17 ರಂದು ಜಗತ್ತಿನಾದ್ಯಂತ 'ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ' (International Day for the Eradication of Poverty) ವನ್ನು ಆಚರಿಸಲಾಗುತ್ತದೆ.
ಕೋಮು ಸೌಹಾರ್ದತೆಗೆ ಧಕ್ಕೆಯಾದಂತೆ ಮಾತನಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮಾಜಿ ಸಚಿವರೂ ಆಗಿರುವ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
"ಮೈಸೂರು ಸ್ಯಾಂಡಲ್ ಎನ್ನುವ ಸಂಸ್ಥೆ ಕನ್ನಡಿಗರ ಕಠಿಣ ಪರಿಶ್ರಮದಿಂದ ನಿರ್ಮಾಣವಾದ ಸಂಸ್ಥೆಯಾಗಿದೆ. ಇಂತಹ ಹೆಮ್ಮೆಯ ಸಂಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಕನ್ನಡಿಗರನ್ನೇ ರಾಯಭಾರಿಯಾಗಿ ನೇಮಕ ಮಾಡಬೇಕು" ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಬೆಳಗಾವಿಯಲ್ಲಿ ಸ್ಫೋಟಕ ಭವಿಷ್ಯ ನುಡಿದ್ದು, ಮುಂಬರುವ ದಿನಗಳಲ್ಲಿ ಜಗತ್ತಿಗೆ ಗಂಭೀರ ಸವಾಲುಗಳು ಎದುರಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.