ಮನೆಗೆಲಸದವಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ತೀರ್ಮಾನಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇಂದು ಮತ್ತಷ್ಟು ತೀವ್ರಗೊಂಡಿದೆ. ಪ್ರತಾಪ್ ಸಿಂಹ ಅವರು ಈ ಹಿಂದೆ ನೀಡಿದ್ದ 'ಎಸ್ಸೆಸ್ಸೆಲ್ಸಿ' ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ಶಾಸಕ ಎಚ್.ಡಿ. ರೇವಣ್ಣ, ಇದಕ್ಕೆ ಅತಿಯಾದ ಮದ್ಯಪಾನ ಮತ್ತು ಮಾಂಸಾಹಾರ ಸೇವನೆಯೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ
"ನಿಮ್ಮ ಊರಿಗೆ ರಸ್ತೆ ಬೇಕಿದ್ದರೆ, ಗ್ಯಾರಂಟಿ ಯೋಜನೆಗಳು ಬೇಡ ಎಂದು ಸಹಿ ಹಾಕಿ" - ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ