ಭಾರೀ ಮಳೆ ಮತ್ತು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಕಾರಣದಿಂದ ಉಭಯ ಜಿಲ್ಲೆಗಳ ಶಾಲಾ ಚಟುವಟಿಕೆಗಳಿಗೆ ಅಡ್ಡಿಯಾಗಿತ್ತು, ಇದೀಗ ಶಾಲೆಗಳು ವಾರಾಂತ್ಯದಲ್ಲೂ ವಿಶೇಷ ತರಗತಿಗಳನ್ನು ಆಯೋಜಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿವೆ.
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು (Socio-Educational and Economic Surveys) ನಿಗದಿತ ಸಮಯಕ್ಕೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 8 ರಿಂದ ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ - ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ.ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ. ಇಲ್ಲಿನ ಬಾಲಕರ ತಂಡವು ದ್ವಿತೀಯ ಸ್ಥಾನಗಳಿಸಿತು