ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ನಾಲ್ಕು ತಿಂಗಳು ಕಳೆದಿದ್ದರೂ ಈವರೆಗೆ ಮೌಲ್ಯಮಾಪಕರ ಸಂಭಾವನೆ ಮತ್ತು ಭತ್ಯೆ ಬಿಡುಗಡೆ ಮಾಡದ ಸರಕಾರದ ಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಪಘಾತ ಸಂತ್ರಸ್ತರನ್ನು ಆಸ್ಪತ್ರೆಗೆ ತಲುಪಿಸಿದವರಿಗೆ ₹25,000 ಬಹುಮಾನ, ಸಂತ್ರಸ್ತರಿಗೆ ₹1.5 ಲಕ್ಷ ಸಹಾಯ ಹಾಗೂ 7 ವರ್ಷಗಳ ವೈದ್ಯಕೀಯ ವೆಚ್ಚ ಭರಿಸುವ ವ್ಯವಸ್ಥೆ ಎಂದು ಗಡ್ಕರಿ ತಿಳಿಸಿದ್ದಾರೆ.
ತುಮಕೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರನ್ನು ಕೊಲ್ಲಲು 'ಸುಪಾರಿ' ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಅವರು ತುಮಕೂರು ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.
ಈ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾಲೂಕಿನ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಆಯೋಜನೆ ಮಾಡಲಾಗಿದ್ದ ರಾಜ್ಯ ಮಟ್ಟದ ಆಯುಕ್ತರುಗಳ ತರಬೇತಿ ಶಿಬಿರ, ಅಗ್ರಗ್ರಾಮಿತ್ವ,ಅಂದಾಜು ಮತ್ತು ತರಬೇತಿ ಸಲಹೆಗಾರರ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದೊಡ್ಡಬಳ್ಳಾಪುರದಲ್ಲಿ ನಡೆಯಿತು.
ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದಲ್ಲಿ ಮಾರ್ಚ್ 29ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.