ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ರಾಜಿ ಸಂಧಾನಕ್ಕೆ ಮತ್ತೊಮ್ಮೆ ಸಲಹೆ ನೀಡಿದೆ.
ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ.
ರಾಜ್ಯದಲ್ಲಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ 9 ಔಷಧಗಳನ್ನು ಹಿಂಪಡೆಯಲು ಹಾಗೂ ತಯಾರಿಕಾ ಕಂಪೆನಿಗಳ ಮಾರಾಟಕ್ಕೆ ನಿರ್ಬಂಧ ಹಾಸುವಂತೆ ಸಚಿವ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.
ಶಾಲೆಗಳಿಗಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮದಲ್ಲಿ ಭೂತಾರಾಧನೆಗೆ ಸಂಬಂಧಿಸಿದ ಉಲ್ಲೇಖವನ್ನು ಕೈಬಿಡಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.