ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ್ ಕಾಲೇಜು ಹಾಗೂ ಧಾರವಾಡದ ಐಐಐಟಿ( ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಪಾರ್ಮೆಶನ ಟೆಕ್ನಾಲಜಿ) ನಡುವೆ ಪರಸ್ಪರ ಶೈಕ್ಷಣಿಕ ಒಪ್ಪಂದ ಏರ್ಪಟ್ಟಿತು.
ಬಲ್ಲಾಡಿ ಚಂದ್ರಶೇಖರ ಭಟ್ ಅವರು ಮುದ್ರಾಡಿಯ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನೇತಾಜಿ ಮತದಾರರ ಸಾಕ್ಷರತ ಕ್ಲಬ್ ಆಶ್ರಯದಲ್ಲಿ ನಡೆದ 2025 -26 ನೆ ಸಾಲಿನ ಶಾಲಾ ಸಂಸತ್ತು ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಚುನಾವಣೆಯ ಮಹತ್ವದ ಕುರಿತು ಮಾತನಾಡಿದರು.
'ಸೌಜನ್ಯ ಹೆಲ್ಪ್ ಲೈನ್' ಹೆಸರಿನಲ್ಲಿ ಸಾವಿರಾರು ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.