ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶ್ವದ ಅತಿ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ರೋಲ್ಸ್-ರಾಯ್ಸ್‌ನಲ್ಲಿ ಉದ್ಯೋಗ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಮಂಗಳೂರಿನ ರಿತುಪರ್ಣ ಭಾಜನರಾಗಿದ್ದಾರೆ.
ರಾಜ್ಯದ ಗಮನ ಸೆಳೆದಿದ್ದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಬಾರಿಯೂ ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ.
ನಮ್ಮ ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಗಳನ್ನು ಭರ್ಜರಿಯಾಗಿ ಕಡಿತಗೊಳಿಸಲಾಗಿದೆ. ಪ್ರತಿ ಬಾಟಲಿಯ ಮೇಲೆ ₹10 ರಿಂದ ₹100 ವರೆಗೆ ಬೆಲೆ ಇಳಿಕೆ ಮಾಡಲಾಗಿದ್ದು, ಇದರಿಂದ ಗ್ರಾಹಕರಿಗೆ ಮಾಸಿಕ ₹116 ಕೋಟಿಗಳಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.