ದಶಕದಷ್ಟು ಹಳೆಯದಾದ ಮಗು ಮಾರಾಟ (ಮಾನವ ಕಳ್ಳಸಾಗಣೆ) ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳಿಗೆ 10 ವರ್ಷಗಳ ಕಠಿಣ ಸಜೆ ಮತ್ತು ತಲಾ 5,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.
ನಗರದ ಮಿತ್ರ ಆಸ್ಪತ್ರೆಯ ಸಮೀಪ ಇಂದು ಬೆಳಗಿನ ಜಾವ ಮಾನಸಿಕ ಅಸ್ವಸ್ಥ ಯುವಕನೋರ್ವ ಸಾರ್ವಜನಿಕರ ಮನೆಗಳಿಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ವಿಶು ಶೆಟ್ಟಿ ಅಂಬಲಪಾಡಿ ಅವರು ಯುವಕನನ್ನು ರಕ್ಷಿಸಿ, ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಉಚ್ಚ ಶಿಕ್ಷಣ ಪಡೆಯುತ್ತಿದ್ದ ಯುವಕ ತೇಜಸ್ (24) ಅವರ ಛಿದ್ರಗೊಂಡ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.
"ಸ್ಪೆಷಲ್ ಆಕ್ಷನ್ ಫೋರ್ಸ್" (SAF) ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುವವರ ಮೇಲೆ ತೀವ್ರ ನಿಗಾ ವಹಿಸುತ್ತಿದ್ದು, ಅದರ ಮೊದಲ ಹೆಜ್ಜೆಯಾಗಿ ಕಾರ್ಕಳದ ಯುವಕನೊಬ್ಬನನ್ನು ಬಂಧಿಸಿದೆ.