ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಹಲವಾರು ದಿನಗಳಿಂದ ಮುಂದುವರೆದ ಧಾರಾಕಾರ ಮಳೆಯ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯ ಗಂಭೀರತೆಗೆ ತಕ್ಕಂತೆ ಭಾರತೀಯ ಹವಾಮಾನ ಇಲಾಖೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
"ಮೈಸೂರು ಸ್ಯಾಂಡಲ್ ಎನ್ನುವ ಸಂಸ್ಥೆ ಕನ್ನಡಿಗರ ಕಠಿಣ ಪರಿಶ್ರಮದಿಂದ ನಿರ್ಮಾಣವಾದ ಸಂಸ್ಥೆಯಾಗಿದೆ. ಇಂತಹ ಹೆಮ್ಮೆಯ ಸಂಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಕನ್ನಡಿಗರನ್ನೇ ರಾಯಭಾರಿಯಾಗಿ ನೇಮಕ ಮಾಡಬೇಕು" ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
ಕ್ಷತ್ರಿಯ ಮರಾಠ ಸಮಾಜ (ರಿ.) ಕಾರ್ಕಳ, ಇದರ ಆಶ್ರಯದಲ್ಲಿ ರ‍್ಯಾಂಕ್ ವಿಜೇತ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಅದಿತ್ಯವಾರ ನಡೆಯಿತು.
ಜೆ.ಇ.ಇ ಮೈನ್, ಬಿ.ಆರ್ಕ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್, 13 ವಿದ್ಯಾರ್ಥಿಗಳಿಗೆ 98ಕ್ಕಿಂತ ಅಧಿಕ ಪರ್ಸಂಟೈಲ್, 17 ವಿದ್ಯಾರ್ಥಿಗಳಿಗೆ 97ಕ್ಕಿಂತ ಅಧಿಕ ಪರ್ಸಂಟೈಲ್, 19 ವಿದ್ಯಾರ್ಥಿಗಳಿಗೆ 96ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 24 ವಿದ್ಯಾರ್ಥಿಗಳು 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.