ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ನಿಂದನೆ ಹಾಗೂ ಜಾತಿ ಆಧಾರಿತ ಟೀಕೆಗಳನ್ನು ಮಾಡಿದ್ದ ಹಿನ್ನೆಲೆಯಲ್ಲಿ ಕಾಸರಗೋಡು ಡೆಪ್ಯುಟಿ ತಹಶೀಲ್ದಾರ್ ಪವಿತ್ರನ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜೈಪುರ ಗ್ರಾಮದಲ್ಲಿ ಜೂನ್ 11ರಂದು ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯು ಉಡುಪಿ ಜಿಲ್ಲೆಯ ಬನ್ನಂಜೆ ಮೂಲದವರೆಂಬ ಶಂಕೆ ವ್ಯಕ್ತವಾಗಿದೆ.