ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಬೆಂಗಳೂರಿನ ಜೆ.ಪಿ. ಪಾರ್ಕ್ ನಿವಾಸಿ ಹಾಗೂ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮೂಲದ ಭರತ್ ಭೂಷಣ್ (41) ಮತ್ತು ಶಿವಮೊಗ್ಗದ ಮಂಜುನಾಥ್ ದುರ್ಮರಣಕ್ಕೀಡಾಗಿದ್ದಾರೆ.
ಕಳೆದ 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿರುವ ಅನುಪ್ ಪೂಜಾರಿ, ಪ್ರಸ್ತುತ ಹವಾಲ್ದಾರ್ ಆಗಿ ಮರಾಠ ಲೈಟ್ ಇನ್ಫೆಂಟ್ರಿ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಹವಾಲ್ದಾರ್ ಅನೂಪ್ ಪೂಜಾರಿ ಮೃತದೇಹದ ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೆರವಣಿಗೆ ಮಾಡಿ, ಬಿಜಾಡಿ ಪಡು ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಬೀಜಾಡಿ ಬೀಚ್ ಸಮೀಪ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ನಡೆಯಲಿವೆ.