ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.
ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಉಡುಪಿಯವರು, ಅನಾಮಿಕ ವ್ಯಕ್ತಿಯನ್ನು ಬಳಸಿಕೊಂಡು ಗಿರೀಶ್ ಮಟ್ಟೆನ್ನವರ, ಮಹೇಶ ಶೆಟ್ಟಿ ತಿಮರೋಡಿ ಹಾಗೂ ಜಯಂತ ಟಿ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಹೆಸರಿಗೆ ಕಳಂಕ ತರುತ್ತಿರುವ ನಿಟ್ಟಿನಲ್ಲಿ ಇವರ ಒಳಸಂಚಿನ ವಿರುದ್ಧ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾಧಿಕಾರಿಗಳಲ್ಲಿ ದೂರು ನೀಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.