ಕರಾವಳಿಯ ವಿಶಿಷ್ಟ ಜಾನಪದ ಕ್ರೀಡೆಯಾದ ಕಂಬಳಕ್ಕೆ ಕರ್ನಾಟಕ ಸರ್ಕಾರವು ರಾಜ್ಯ ಕ್ರೀಡೆಯ ಮಾನ್ಯತೆ ನೀಡಲು ನಿರ್ಧರಿಸಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
"ಮಾದಕ ದ್ರವ್ಯ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ, ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು" ಎಂದು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಹೇಳಿದರು.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ, ಮಗನೊಬ್ಬ ತನ್ನ ತಾಯಿಯನ್ನು ಕೊಂದು ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ಭಾನುವಾರ ತಡರಾತ್ರಿಯಲ್ಲಿ ನಡೆದಿದೆ.