ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಭಾಷೆಗೆ ರಾಜ್ಯಭಾಷಾ ಮಾನ್ಯತೆ ನೀಡಬೇಕೆಂಬ ಹೋರಾಟ ಬಿಗಿಗೊಂಡಿದ್ದ ಸಂದರ್ಭದಲ್ಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕರಿಗೆ ದ.ಕ. ಜಿಲ್ಲಾ ಪಂಚಾಯತ್ ಕಳುಹಿಸಿದ ಒಂದು ಪತ್ರ ಚರ್ಚೆಗೆ ಗ್ರಾಸವಾಗಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ವಿರೋಧವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರಿನಲ್ಲಿ ಕೋಮು ಅಶಾಂತಿ ಉಂಟುಮಾಡುವ ಯತ್ನಕ್ಕೆ ಮುಂದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.