ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯ ಬೆನ್ನಲ್ಲೆ , ದೇಶಾದ್ಯಂತ ಭದ್ರತಾ ಎಚ್ಚರಿಕೆಯನ್ನು ಹೆಚ್ಚಿಸಲಾಗಿದೆ. ಇದರ ಅಂಗವಾಗಿ ‘ಆಪರೇಷನ್ ಅಭ್ಯಾಸ್ ’ ಹೆಸರಿನಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾಕ್ ಡ್ರಿಲ್ (Mock Drill) ನಡೆಯಿತು
ಪಹಲ್ಗಾಮ್‌ನಲ್ಲಿ ಭಾರತೀಯ ಯೋಧರ ಮೇಲೆ ನಡೆದ ಉಗ್ರರ ಹತ್ಯಾಕಾಂಡಕ್ಕೆ ತೀರಾ ತೀಕ್ಷ್ಣ ಪ್ರತೀಕಾರವಾಗಿ ಭಾರತೀಯ ಸೇನೆ "ಆಪರೇಷನ್ ಸಿಂಧೂರ್" ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ.