ಭೀಮಾ ತೀರದ ಹೆಸರಾಂತ ರೌಡಿಶೀಟರ್ ಬಾಗಪ್ಪ ಹರಿಜನ ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದಾರೆ. ವಿಜಯಪುರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಈತನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕೊಚ್ಚಿ, ಕೈ ಕತ್ತರಿಸಿ ಹತ್ಯೆ ಮಾಡಿದ್ದಾರೆ.
ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ (28) ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಕೋಪದಿಂದ ಅಡುಗೆ ಕೋಣೆಗೆ ಚಾಕು ತಂದು ತಂಗಿಯ ಕುತ್ತಿಗೆಗೆ ಇರಿದಿದ್ದಾನೆ. ಜಗಳ ಬಿಡಿಸಲು ಬಂದಿದ್ದ ಅತ್ತಿಗೆ ತಾಸೀಂ ತಾಜ್ ಅವರ ಮೇಲೂ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಿವಿ ಕತ್ತರಿಸಿ ಕಾಲು ಒತ್ತಿದ ಪರಿಣಾಮ ಗಂಭೀರ ಗಾಯಗಳಾಗಿವೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ