ಜನರ ಜೀವನಾಡಿಯಂತಿರುವ ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಿ ದುರಸ್ತಿಗೊಳಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ 'ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ 'ರಸ್ತೆ ಗುಂಡಿಗಳ ಜೊತೆ ಸೆಲ್ಫಿ' ಫೋಟೋ ಹಂಚಿಕೊಳ್ಳುವ ಮೂಲಕ ಚಾಲನೆ ನೀಡಿದರು.
ಶುಕ್ರವಾರ ಬೆಳಿಗ್ಗೆ ವಾಕಿಂಗ್‌ಗೆ ತೆರಳಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾನುವಾರ ಸಂಭವಿಸಿದ ಭಾರಿ ಮಳೆಯಿಂದಾಗಿ ನಾಡಕಚೇರಿ ಕಾರ್ಯಾಲಯವಾಗಿ ಬಳಸಲಾಗುತ್ತಿದ್ದ ಹಳೆಯ ಕಟ್ಟಡವು ಸಂಪೂರ್ಣವಾಗಿ ಧರೆಗುರುಳಿದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ , ಭಾರತ ಸರ್ಕಾರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ.