ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.