ಈ ವಿಶೇಷ ದಿನವನ್ನು ಆಗಸ್ಟ್ 3ರಂದು (3/8) ಆಚರಿಸುವುದು ಸ್ನೇಹದ ಮಹತ್ವವನ್ನು ಗುರುತಿಸುವುದಕ್ಕಾಗಿ. ಇದು ನಮ್ಮ ಜೀವನದಲ್ಲಿ ಮಿತ್ರರೊಂದಿಗೆ ಹಂಚಿಕೊಳ್ಳುವ ಪ್ರೀತಿ, ನಂಬಿಕೆ ಮತ್ತು ಸಹಾನುಭೂತಿಯನ್ನು ಸ್ಮರಿಸುತ್ತದೆ.
ಗಡಿ ರಾಜ್ಯಗಳಲ್ಲಿ ಪೆಟ್ರೋಲ್ ಬಂಕ್‌ಗಳಿಗೆ ಸಾಲು ಕಟ್ಟಿರುವ ದೃಶ್ಯಗಳು ವೈರಲ್ ಆದ ಬೆನ್ನಲ್ಲೇ, ಇಂಡಿಯನ್ ಆಯಿಲ್ ಕಾರ್ಪೊರೇಶನ್ “ಇಂಧನ ಬೇಕಾದಷ್ಟಿದೆ , ಆತಂಕ ಬೇಡ!” ಎಂದು ಸ್ಪಷ್ಟನೆ ನೀಡಿದೆ.
ಮತ್ತು ಕಾಶ್ಮೀರದ ಪಹಲ್ಯಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ–ಪಾಕಿಸ್ತಾನ ನಡುವೆ ಉದ್ವಿಗ್ನತೆ ತೀವ್ರಗೊಂಡಿದ್ದು, ಇದರ ಪರಿಣಾಮವಾಗಿ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಾವಳಿಯನ್ನು ಅಮಾನತುಗೊಳಿಸಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತಾ ಅಲರ್ಟ್ ಘೋಷಿಸಲಾಗಿದ್ದು, ಎಲ್ಲ ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.
ಭಾರತದ ತಾಳ್ಮೆಯನ್ನು ಪಾಕಿಸ್ತಾನ ಮತ್ತೆ ಪರೀಕ್ಷಿಸುವ ಪ್ರಯತ್ನ ಮಾಡಿದರೆ, ಇದು ದೇಶದಿಂದ 'ಗುಣಮಟ್ಟದ ಪ್ರತಿಕ್ರಿಯೆ'ಗೆ ದಾರಿ ಮಾಡಿಕೊಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ ಅಪರಾಧ ಪ್ರಕರಣಗಳ ಸಮರ್ಪಕ ತನಿಖೆ ಮತ್ತು ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ, ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಧರಣಿ ಹಮ್ಮಿಕೊಂಡಿತ್ತು.