ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಹಾಗೂ ಇತರ ಆರೋಪಿಗಳಿಗೆ ಮಹತ್ವದ ಆದೇಶವೊಂದು ಹೊರಬಿದ್ದಿದೆ.
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಕೈದಿಗಳಿಗೆ 'ರಾಜಾತಿಥ್ಯ' ನೀಡುತ್ತಿರುವ ಗಂಭೀರ ಆರೋಪಗಳ ಕುರಿತು ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.