ವಿಶ್ವದಾದ್ಯಂತ ಯೇಸು ಕ್ರಿಸ್ತನ ಜನ್ಮದಿನವಾದ 'ಕ್ರಿಸ್‌ಮಸ್' ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಪ್ರತಿಷ್ಠಿತ 'ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್'ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಮೆರಿಕದ ಅತ್ಯಾಧುನಿಕ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್–2’ ಅನ್ನು ತನ್ನ ಅತಿ ಭಾರದ ಎಲ್‌ವಿಎಂ3–ಎಂ6 (LVM3-M6) ರಾಕೆಟ್ ಮೂಲಕ ಯಶಸ್ವಿಯಾಗಿ ಕಕ್ಷೆಗೆ ಸೇರಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.