ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರಮೇಶ್ ಕಿಲಾರಿ ಎಂಬ ಆರೋಪಿಯನ್ನು ಬಂಧಿಸಲು ತೆರಳಿದಾಗ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ಶನಿವಾರ (ಆಗಸ್ಟ್ 30) ಮುಂಜಾನೆ ನಡೆದಿದೆ.
ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ