ಪಿಡಿಎ ಇಂಜಿನಿಯರಿಂಗ್ ಕಾಲೇಜಿನ 13 ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 30, 2025 ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಚಟುವಟಿಕೆ ಕೇಂದ್ರ (ಎಸ್‌ಎಸಿ) ಪಿಡಿಎ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಕಳದ ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ವಿಧಿಸಲಾಗಿದ್ದ ನಿರ್ಬಂಧದ ವಿರುದ್ಧದ ದೂರಿಗೆ ಹೈಕೋರ್ಟ್ ತಡೆ ನೀಡಿದ್ದು, ನ್ಯಾಯವಾದಿ ಮಹೇಂದ್ರ ಎಸ್. ಎಸ್. ಬೆಂಗಳೂರು ಅವರ ವಾದಕ್ಕೆ ಜಯ ಲಭಿಸಿದೆ.
ನಿಯಮ ಮೀರಿ ಧ್ವನಿವರ್ಧಕ ಬಳಸಿದ ಆರೋಪದ ಮೇಲೆ ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ, ಪುಂಜಾಲಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.