ಸುಪ್ರೀಂಕೋರ್ಟ್, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಕಲಂ 35ರಡಿ ವಾಟ್ಸಾಪ್ ಅಥವಾ ಇತರ ವಿದ್ಯುನ್ಮಾನ ವಿಧಾನಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸುವಂತಿಲ್ಲ ಎಂದು ಹೇಳಿದೆ.
ಮೃತರನ್ನು 55 ವರ್ಷದ ಮೆಲ್ರಾಯ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮನೆಯ ಮೊದಲ ಮಹಡಿಯ ಕಬ್ಬಿಣದ ಅಡ್ಡಪಟ್ಟಿಗೆ ಹಗ್ಗ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ಉಡುಪಿ-ಕಾರ್ಕಳ ಹೆದ್ದಾರಿಯ ಸಾರ್ವಜನಿಕ ರಸ್ತೆಯ ನೀರಾ ಎಂಬಲ್ಲಿ ನಾಲ್ವರು ಕಾರಿನಲ್ಲಿ ಗಾಂಜಾ ಹಾಗೂ ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ