ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಚ್ಛಿಸಿದ್ದಾರೆ ಎನ್ನಲಾಗಿದೆ.
ಶ್ರೀ ಮದ್ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ ಪಡಕುತ್ಯಾರು ಇಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು.
ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಅಮೆರಿಕಾದ ಬೋಸ್ಟನ್‌ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.