ಸಿದ್ದರಾಮಯ್ಯನವರ ಸಿಎಂ ಹುದ್ದೆಗೆ ಬೆಂಬಲ ಸೂಚಿಸಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೂ “ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾರೂ ಅಪಸ್ವರ ಎತ್ತಬೇಡಿ.” ಎಂದು ಕಿವಿಮಾತು ನೀಡಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜೂನ್ 4ರಂದು ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ನಾನೇ ಎಂದು ಘೋಷಿಸಿದ್ದಾರೆ.
ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮಾಜಿ ಸಚಿವರೂ ಆಗಿರುವ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಮಾಜಿ ಸಚಿವ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ಅವರ ಹಿರಿಯ ಸಹೋದರ ಸುಜಿತ್ ಕುಮಾರ್ (53) ಅನಾರೋಗ್ಯದಿಂದ ಬಳಲುತ್ತಿದ್ದು, ಶುಕ್ರವಾರ ಅವರ ದೇಹಾಂತವಾಯಿತು.