ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಎಲ್ಲಾ ನಾಗರಿಕರು ಸತ್ಯದ ಪರನಿಂತು ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮ ಗೊಳ್ಳುವ ಪೊಲೀಸ್ ಇಲಾಖೆಯ ಪರನಿಂತು ಅವರಿಗೆ ಧೈರ್ಯ ತುಂಬಿ ಸಹಕಾರ ನೀಡುವ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಿತಾ ಡಿಸೋಜರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.