ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು (ಜುಲೈ 30, 2025, ಬುಧವಾರ) ಜಾಮೀನು ಕುರಿತು ಆದೇಶ ಪ್ರಕಟಿಸಲಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಕೆ.ಆರ್. ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದು, ಜುಲೈ 30ರಂದು ಅಂತಿಮ ಆದೇಶ ಪ್ರಕಟಿಸಲಿದೆ.