ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ಸರ್ಕಾರಿ ಸ್ವಾಮ್ಯದ ಆವರಣಗಳಲ್ಲಿ ನಿರ್ಬಂಧಿಸುವಂತೆ ಆಗ್ರಹಿಸಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇಂದು ಮತ್ತಷ್ಟು ತೀವ್ರಗೊಂಡಿದೆ. ಪ್ರತಾಪ್ ಸಿಂಹ ಅವರು ಈ ಹಿಂದೆ ನೀಡಿದ್ದ 'ಎಸ್ಸೆಸ್ಸೆಲ್ಸಿ' ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಕರ್ನಾಟಕದ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳು ಇನ್ನು ಮುಂದೆ ತಮ್ಮದೇ ಆದ ಪ್ರತ್ಯೇಕ ಲಾಂಛನ (ಲೋಗೋ) ಮತ್ತು ಮೊಹರು (ಸೀಲ್) ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವಾಲಯ ತನ್ನ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಿರುವುದನ್ನು ತೀವ್ರವಾಗಿ ವಿರೋಧಿಸಿದ ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, “ನನ್ನ ಹೆಸರಿದ್ದರೆ ಅನುಮತಿ ಸಿಗದು, ಇಲ್ಲದಿದ್ದರೆ ಸಿಗುತ್ತದೆಯೆಂದರೆ ಇದನ್ನು ರಾಜಕೀಯವಲ್ಲದೆ ಇನ್ನೇನು?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.