ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಸರಕಾರಿ ಸ್ಥಳಗಳು ಮತ್ತು ಮುಜುರಾಯಿ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಎಲ್ಲಾ ಚಟುವಟಿಕೆಗಳನ್ನು ರದ್ದು ಮಾಡುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರದ ಬೆನ್ನಲ್ಲೇ, ಸಿಎಂ ಅವರು ಮಹತ್ವದ ಸೂಚನೆ ನೀಡಿದ್ದಾರೆ.
ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರು, ಆರ್‌ಎಸ್‌ಎಸ್ ನಿಷೇಧಿಸುವ ಕುರಿತು ಕಾಂಗ್ರೆಸ್ ಇರಿಸಿಕೊಂಡಿರುವ ಉದ್ದೇಶವನ್ನು "ತಿರುಕನ ಕನಸು" ಎಂದು ಬಣ್ಣಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ರಾಜ್ಯ ಘಟಕದ ಚಾಮರಾಜಪೇಟೆಯಲ್ಲಿರುವ ಕಚೇರಿ 'ಕೇಶವ ಕೃಪ' ಗೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ಸರ್ಕಾರಿ ಸ್ವಾಮ್ಯದ ಆವರಣಗಳಲ್ಲಿ ನಿರ್ಬಂಧಿಸುವಂತೆ ಆಗ್ರಹಿಸಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.